ಮೈಸೂರು: ಕ್ರಿಕೆಟ್ ಆಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
6ನೇ ತರಗತಿ ವಿದ್ಯಾರ್ಥಿ ಧನಂಜಯ (12) ಮೃತ ಬಾಲಕ. ಸ್ನೇಹಿತರೊಡನೆ ಕ್ರಿಕೆಟ್ ಆಡುವ ಸಂದರ್ಭದಲ್ಲಿ ಕ್ರಿಕೆಟ್ ಬಾಲ್ ತಂತಿಯ ಮೇಲೆ ಬಿದ್ದಿದೆ. ಬಾಲನ್ನು ಹಿಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಧನಂಜಯ್ ಸಾವನ್ನಪ್ಪಿದ್ದಾನೆ. ಬೆಟ್ಟದಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

