ಮೈಸೂರು: ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದೆ.ಮಹಿಳೆ ವಿಚಾರದಲ್ಲಿ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ.
ಮೈಸೂರು ನಿವಾಸಿ ಮಹೇಶ್ ಟಿ. (40) ಮೃತ ವ್ಯಕ್ತಿ. ಸಾರ್ವಜನಿಕವಾಗಿ ಮಹೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದೆ. ಹಾಡಹಗಲೇ ಜನನಿಬಿಡ ಪ್ರದೇಶದಲ್ಲೇ ಈ ಕೃತ್ಯ ನಡೆದಿರುವುದು ಆತಂಕ ಸೃಷ್ಟಿಸಿದೆ.
ಸ್ಥಳಕ್ಕೆ ವಿ.ವಿ. ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪರಿಶೀಲನೆ ನಡೆಸಿದ್ದಾರೆ. ಹಂತಕರ ಪತ್ತೆಗೆ ಜಾಲ ಬೀಸಿದ್ದಾರೆ. ಮಹಿಳೆಯೊಂದಿಗಿನ ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ.

