ಮೈಸೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪನವರ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರು ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪನವರ ಆಪ್ತರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಕಾಪು ಸಿದ್ದಲಿಂಗಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲೇ ಕಾಪು ಸಿದ್ದಲಿಂಗಸ್ವಾಮಿ ಅವರು ನಿಧನರಾಗಿದ್ದಾರೆ.

ಅವರು ನಿಧನರಾಗುವ ಮುಂಚೆ  ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ತೆರಳಿದ್ದರು.

ಕಳೆದ ವಿಧಾನಸಭಾ ಎಲೆಕ್ಷನ್​ನಲ್ಲಿ ಸಿಎಂ ಸಿದ್ದರಾಮಯ್ಯ ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಸೋಮಣ್ಣ ಪರವಾಗಿ ಕಾಪು ಸಿದ್ದಲಿಂಗಸ್ವಾಮಿ ಕೆಲಸ ಮಾಡಿದ್ದರು.