ನಂಜನಗೂಡು: ವೈದ್ಯರ ಮನೆಯಲ್ಲಿ ಖದೀಮರ ಕೈಚಳಕ ನಡೆಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿದ್ದಾರೆ.

225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ. ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ ಡಾ.ಅಮೂಲ್ಯ, ಡಾ.ಮಧು ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಬೀಗ ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಶನಿವಾರ ಚಿಕ್ಕಮಂಗಳೂರಿಗೆ ತೆರಳಿದ್ದರು. ಹಿಂದಿರುಗಿದಾಗ ಬೀಗ ಮುರಿದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಡಿವೈಎಸ್ಪಿ ರಘು ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಬಂಧನಕ್ಕೆ ನಂಜನಗೂಡು ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.