ನಂಜನಗೂಡು: ಕರ್ನಾಟಕ ರಾಜ್ಯ ಮಹಾನಾಯಕ ಭೀಮರಾವ್ ಪತ್ತಿನ ಸಹಕಾರ ಸಂಘದ ರಾಜ್ಯಾಧ್ಯಕ್ಷರಾಗಿ ಚಿನ್ನಂಬಳ್ಳಿ ಸಿಆರ್ ಮಹದೇವ್ ಆಯ್ಕೆಯಾಗಿದ್ದಾರೆ.
ಮಹಾ ನಾಯಕ ಭೀಮರಾವ್ ಪತ್ತಿನ ಸಹಕಾರ ಸಂಘದ ರಾಜ್ಯಾಧ್ಯಕ್ಷರಾಗಿ ಚಿನ್ನಂಬಳ್ಳಿ ಸಿ.ಆರ್ ಮಹದೇವ್ ರವರು ಆಯ್ಕೆಯಾದ ಹಿನ್ನೆಲೆಯಲ್ಲಿ ನಂಜನಗೂಡು ನಗರದ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ನೂತನ ರಾಜ್ಯಾಧ್ಯಕ್ಷ ಚಿನ್ನಂಬಳ್ಳಿ ಸಿ.ಆರ್ ಮಹದೇವ್ ಮಾತನಾಡಿ, ಮಹಾನಾಯಕ ಭೀಮರಾವ್ ಪತ್ತಿನ ಸಹಕಾರ ಸಂಘದ ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆಯನ್ನು ಸ್ಥಾಪಿಸಿದ್ದೇವೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮುದಾಯಕ್ಕೆ ಹಣಕಾಸಿನ ವ್ಯವಸ್ಥೆಯನ್ನು ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸುಮಾರು ಮೂರು ವರ್ಷಗಳಿಂದಲೂ ಸ್ಥಾಪನೆ ಮಾಡಲು ಪರಿಶ್ರಮಪಟ್ಟಿದ್ದೇವೆ. ಸುಮಾರು 500 ಸದಸ್ಯರನ್ನು ಆಯ್ಕೆ ಮಾಡಿಕೊಂಡಿದ್ದೇವೆ. ರಾಜ್ಯಮಟ್ಟದಲ್ಲಿ ಸಂಸ್ಥೆಯನ್ನು ನೊಂದಣಿ ಮಾಡಿದ್ದೇವೆ.
ಈಗಾಗಲೇ 15 ಸದಸ್ಯರನ್ನೂ ಒಳಗೊಂಡ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ನನ್ನನ್ನು ರಾಜ್ಯಾದ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಮಂಡ್ಯದ ಸೀತಾರಾಮು ರವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ನಮ್ಮನ್ನು ಆಯ್ಕೆ ಮಾಡಿ ಜವಾಬ್ದಾರಿ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಸಮುದಾಯದ ಏಳಿಗೆಗೆ ದುಡಿಯಲು ಈ ಸಂಸ್ಥೆಯನ್ನು ಪ್ರಾರಂಭಿಸಿ, ರಾಜ್ಯಮಟ್ಟದಲ್ಲಿ ಸ್ಥಾಪನೆ ಮಾಡಿದ್ದೇವೆ. ಷೇರುದಾರರು ಹೆಚ್ಚಾದರೆ ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲೂ ವಿಸ್ತರಣೆ ಮಾಡುತ್ತೇವೆ ಎಂದರು.
ನಂತರ ಶಿಕ್ಷಕ ಕುಮಾರಸ್ವಾಮಿ ಮಾತನಾಡಿ, ಮಹಾನಾಯಕ ಭೀಮರಾವ್ ಫೌಂಡೇಶನ್ ರಾಜ್ಯಮಟ್ಟದ ಸಂಸ್ಥೆಯಾಗಿ ಸ್ಥಾಪನೆಯಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಗ್ರಾಮೀಣ ಭಾಗದಲ್ಲೂ ವಿಸ್ತರಣೆ ಮಾಡಲು ಚಿಂತನೆ ನಡೆಸಿದ್ದೇವೆ. ಈ ಸಂಸ್ಥೆಯು ಸಮುದಾಯದ ಆಸ್ತಿ ಆಗಬೇಕು. ಸಮುದಾಯದ ಬೆಳವಣಿಗೆ ಸಹಕಾರಿಯಾಗಬೇಕು. ಮಹಾ ನಾಯಕ ಭೀಮರಾವ್ ಫೌಂಡೇಶನ್ ನಲ್ಲಿ ಅಂಗಸಂಸ್ಥೆಗಳಾಗಿ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ಪತ್ತಿನ ಸಹಕಾರ ಸಂಘಗಳು ಕಾರ್ಯನಿರ್ವಹಿಸಲಿವೆ.
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನೀಟ್ ಅಕಾಡೆಮಿಯನ್ನು ತೆರೆಯಲಾಗಿದೆ. ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗುತ್ತಿದೆ. ರಾಜ್ಯಾಧ್ಯಕ್ಷರನ್ನಾಗಿ ಸಿ.ಆರ್ ಮಹದೇವ್ ರಾಜ್ಯ ಉಪಾಧ್ಯಕ್ಷರಾಗಿ ಸೀತಾರಾಮು ರವರನ್ನು ಆಯ್ಕೆ ಮಾಡಿ ಜವಾಬ್ದಾರಿ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಶಾಖೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಸಿ.ಎಂ ಅಂಕಯ್ಯ, ಮಹದೇವಯ್ಯ, ಶಿಕ್ಷಕ ಗಟ್ಟವಾಡಿಪುರ ಕುಮಾರಸ್ವಾಮಿ, ಕಮಲೇಶ್, ಮಾಜಿ ಗ್ರಾಪಂ ಅಧ್ಯಕ್ಷ ನೇರಳೆ ವಿರೇಂದ್ರ, ದಸಂಸ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್, ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರಾದ ಅಭಿನಾಗಭೂಷಣ್ ಪುಟ್ಟಸ್ವಾಮಿ, ಅಳಗಂಚಿ ದಾಸಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

