ನಂಜನಗೂಡು : ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದಾಸೋಹ ಭವನದ ಆವರಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಹಾಗೂ ಜಿಲ್ಲಾಡಳಿತದ ವತಿಯಿಂದ ಶ್ರೀ ದಾಸ ಶ್ರೇಷ್ಠ ಕನಕದಾಸರ 538ನೇ ಜಯಂತೋತ್ಸವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ವಹಿಸಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಕನಕದಾಸರ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮಕ್ಕೆ ಶಾಸಕ ದರ್ಶನ್ ಹಾಗೂ ವಿಧಾನ ಪರಿಷತ್ ಸದಸ್ಯ ಡಾ, ಯತೀಂದ್ರ ಚಾಲನೆ ನೀಡಿದರು. ಮೆರವಣಿಗೆಯು ಆರ್ ಪಿ ರಸ್ತೆಯ ಮೂಲಕ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ಮೆರುಗು ನೀಡಿದವು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕನಕ ಜಯಂತೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ತಾಂಡವಪುರ ಮೋಹನ್ ಕುಮಾರ್, ಮೆರವಣಿಗೆ ಸಮಿತಿ ಅಧ್ಯಕ್ಷ ಸಿದ್ದರಾಜು, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮಾಜಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಸಿ ಬಸವರಾಜು, ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್,
ಮಾಜಿ ಜಿಪಂ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಮಾರುತಿ, ಬಗರ್ ಹುಕುಂ ಸಮಿತಿಯ ಸದಸ್ಯೆ ಜಯಮಾಲಾ ಬೀರೇಗೌಡ, ರಾಜ್ಯ ಕುರುಬರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ, ಬಿ.ಎನ್ ರಾಮು, ಸಿದ್ದರಾಜು, ಕೆಂಪಣ್ಣ, ಸಿಎಂ ಶಂಕರ್, ಪ್ರಭಾವತಿ, ಕುರಿಹುಂಡಿ ರಾಜಣ್ಣ, ಬಸವಣ್ಣ, ಪ್ರಚಾರ ಸಮಿತಿಯ ಅಧ್ಯಕ್ಷ ಬೀರೇಗೌಡ, ಕುಳ್ಳಯ್ಯ, ತಹಶೀಲ್ದಾರ್ ಶಿವಕುಮಾರ್ ಕಾಸನೂರು, ನಗರಸಭಾ ಆಯುಕ್ತ ಬಸವರಾಜು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜರಾಲ್ಡ್ ರಾಜೇಶ್, ಸೇರಿದಂತೆ ಹಲವರು ಹಾಜರಿದ್ದರು.

