ಮೈಸೂರು: ಪತ್ರಿಕಾ ದಿನಾಚರಣೆ ಅಂಗವಾಗಿ ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಹಳೆ ಸಂತೆಪೇಟೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಉಚಿತವಾಗಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮೂಡ ಅಧ್ಯಕ್ಷರಾದ ಎಚ್ ವಿ ರಾಜೀವ್ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ ನೀಡಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿದಿನ ಪೈಪೋಟಿ ಹೆಚ್ಚುತ್ತಿದೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ,ವ್ಯವಹಾರ ಜ್ಞಾನ ವೃದ್ಧಿಸಿಕೊಳ್ಳಲು ದಿನಪತ್ರಿಕೆಯನ್ನು ಓದುವ ದಿನಚರಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ನಂತರ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ ಪತ್ರಕರ್ತರಿಗೆ ಬಿಡುವು ಎನ್ನುವುದಿಲ್ಲ, ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಾರೆ, ಕುಟುಂಬದ ಸದಸ್ಯರೊಂದಿಗೆ ಕಲಿಯಲು ಸಹ ಅವರಲ್ಲಿ ಸಮಯ ಇರುವುದಿಲ್ಲ, ಒತ್ತಡದ ನಡುವೆಯೇ ಕುಟುಂಬ ಸದಸ್ಯರೆಲ್ಲರೂ ಒಂದೆಡೆ ಸೇರುವ ಹಾಗೆ ಕಾರ್ಯಕ್ರಮ ಏರ್ಪಡಿಸಲು ಪತ್ರಕರ್ತರ ಸಂಘ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೇರಿ ಗೋಪಾಲ್, ಹಿರಿಯ ಸಮಾಜ ಸೇವಕರಾದ ರಘುರಾಮ್ ವಾಜಪಾಯಿ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ ರಾಘವೇಂದ್ರ, ಕೆ ಎಮ್ ಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಎಸ್ ಎನ್ ರಾಜೇಶ್, ಹಿರಿಯ ಪತ್ರಿಕಾ ವಿಚಾರಕರಾದ ರಮಾಬಾಯಿ, ರಾಕೇಶ್, ಹರೀಶ್ ನಾಯ್ಡು ಹಾಗೂ ಇನ್ನಿತರರು ಹಾಜರಿದ್ದರು.