ನಂಜನಗೂಡು: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಂಜನಗೂಡಿನಲ್ಲಿ ನವ ಮೈಸೂರಿನ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141ನೇ ಜಯಂತಿಯನ್ನು ಆಚರಣೆ ಮಾಡಲಾಯಿತು.

ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕಂದಾಯ ಇಲಾಖೆಯ ಶಿರಸ್ತೇದಾರ್ ರಾಜು ಮಾತನಾಡಿ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕೊಡುಗೆಗಳು ಅಪರವಾಗಿದೆ. ನಾಡಿನ ಜನತೆಗೆ ಕೃಷಿ ಮಾಡಲು ಅನುಕೂಲವಾಗುವಂತೆ ಕನ್ನಂಬಾಡಿ ಕಟ್ಟೆ, ಕೆರೆಗಳನ್ನು ನಿರ್ಮಿಸಿ ಅಭಿವೃದ್ಧಿ ಮಾಡಿದ್ದಾರೆ.

ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಮೈಸೂರು ವಿಶ್ವವಿದ್ಯಾನಿಲಯ, ಕೆ ಆರ್ ಎಸ್ ಆಸ್ಪತ್ರೆ ನಿರ್ಮಾಣ, ಸ್ಟೆಟ್ ಬ್ಯಾಂಕ್ ಆಫ್ ಮೈಸೂರು, ವಿದ್ಯುತ್ ಉತ್ಪಾದನೆ ಘಟಕ ನಿರ್ಮಾಣ ಸೇರಿದಂತೆ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ.

ಜನರ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಿ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದ್ದಾರೆ. ಇದೇ ನಿಟ್ಟಿನಲ್ಲಿ ರಾಜ್ಯದ ಜನರ ಅಪಾರ ಪ್ರೀತಿ ವಿಶ್ವಾಸ ಗಳಿಸಿದರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.