ನಂಜನಗೂಡು: ವಿವಿಧ ಜಯಂತಿಗಳ ಆಚರಣೆಯ ಹಿನ್ನೆಲೆಯಲ್ಲಿ ನಂಜನಗೂಡು ನಗರದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ ಬಸವ ಜಯಂತಿ, ಶಂಕರಾಚಾರ್ಯರ ಜಯಂತಿ, ಶ್ರೀ ಭಗೀರಥ ಜಯಂತಿ, ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ, ಹಾಗೂ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮಗಳನ್ನು ರೂಪಿಸಿ, ಅಚ್ಚುಕಟ್ಟಾಗಿ ಅರ್ಥಪೂರ್ಣವಾಗಿ ಜಯಂತಿಗಳನ್ನು ಆಚರಣೆ ಮಾಡುವಂತೆ ಸೂಚಿಸಿದರು. ಜಯಂತಿಗಳ ಆಚರಣೆಯ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

