ನಂಜನಗೂಡು : ಮುಳ್ಳೂರು ಗ್ರಾಮದಲ್ಲಿ ಗುರುವಾರ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಯನ್ನು ಸಂಸದ ಸುನೀಲ್ ಬೋಸ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ಲೋಕಾರ್ಪಣೆಗೊಳಿಸಿದರು.

ನಂತರ ವಿಶ್ವ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ದಿವಂಗತ ಮುಳ್ಳೂರು ನಾಗರಾಜು ವೇದಿಕೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗಿಸುವುದರ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಸದ ಸುನಿಲ್ ಬೋಸ್ ಮಾತನಾಡಿ, ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಇನ್ನೂ ಕೂಡ ಅಸಮಾನತೆ ಇದೆ. ಕೇಂದ್ರ ಸರ್ಕಾರ ಜಾತಿ ಗಣತಿ ಬಗ್ಗೆ ಘೋಷಣೆ ಮಾಡಿರುವುದು ಸ್ವಾಗತಾರ್ಹ ವಿಷಯ. ಜಾತಿ ಜನಗಣತಿಯಿಂದ ಹಿಂದುಳಿದ ವರ್ಗಗಳು ಎಷ್ಟಿವೆ ಎಂಬ ಮಾಹಿತಿ ಬಹಿರಂಗವಾಗಲಿದೆ. ಆದರೆ, ಎಷ್ಟು ಕಾಲಮಿತಿಯಲ್ಲಿ ಘೋಷಣೆಯಾಗುತ್ತದೆ ಎಂಬುದು ಇಲ್ಲಿ ಮುಖ್ಯ. ಈ ಘೋಷಣೆ ಬರಿ ಘೋಷಣೆಯಾಗಿಯೇ ಉಳಿಯಬಾರದು ಎಂದರು.

ಈ ಸಂದರ್ಭದಲ್ಲಿ ಬುದ್ಧ ವಿಹಾರದ ಶ್ರೀ ಸುಗತಪಾಲ ಬಂತೇಜಿ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಮಾಜಿ ಶಾಸಕರಾದ ಬಿ ಹರ್ಷವರ್ಧನ್, ಕಳಲೆ ಕೇಶವಮೂರ್ತಿ, ನಗರ ಸಭಾ ಅಧ್ಯಕ್ಷ ಶ್ರೀಕಂಠ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಚಿತ್ರನಟ ಚೇತನ್, ಬಿಎಸ್ ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, ಮಾಜಿ ಮೇಯರ್ ಪುರುಷೋತ್ತಮ್, ರಾಮಸ್ವಾಮಿ, ಸಾಹಿತಿ ಮಲ್ಕುಂಡಿ ಮಹದೇವಸ್ವಾಮಿ, ಕುರಹಟ್ಟಿ ಮಹೇಶ್, ನಾಗೇಶ್ ರಾಜ್, ಇಂಧನ ಬಾಬು, ಚಿಕ್ಕರಂಗನಾಯಕ ಸೇರಿದಂತೆ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.