ಮೈಸೂರು: ಚಂದ್ರ ಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡೇಶ್ವರಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ದೇವಾಲಯ ಬಂದ್ ಮಾಡಲಾಗಿದೆ.
ರಾತ್ರಿ 8.30ರ ವರೆಗೆ ದೇವಾಲಯದ ಬಾಗಿಲು ಮುಚ್ಚಲು ವ್ಯವಸ್ಥೆ ಮಾಡಲಾಗಿದೆ. ಗ್ರಹಣ ಸ್ಪರ್ಶ ಕಾಲ, ಮಧ್ಯ ಕಾಲ ಹಾಗೂ ಮೋಕ್ಷ ಕಾಲದಲ್ಲಿ ವಿಶೇಷ ಪೂಜೆ ನಡೆಯಲಿದೆ. ವಿಶೇಷ ಪೂಜೆ ವೇಳೆ ಸಾರ್ವಜನಿಕ ಪ್ರವೇಶ ನಿಷೇಧ ಮಾಡಲಾಗಿದೆ.
ನಾಳೆ ಬೆಳಿಗ್ಗೆ 7.30 ರಿಂದ ಎಂದಿನಂತೆ ಸಾರ್ವಜನಿಕ ದರ್ಶನಕ್ಕೆದೇವಾಲಯ ಓಪನ್ ಮಾಡಲಾಗುತ್ತದೆ. ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಪೂಜಾ ಕೈಂಕರ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ.ಗ್ರಹಣ ಕಾಲದಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ನೈವೇದ್ಯ ಅರ್ಪಣೆ ಮಾಡಲಾಗುತ್ತದೆ.

