ನಂಜನಗೂಡು: ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿಯಾಗಿ ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಸಿ.ಎಂ ಮಹದೇವಯ್ಯ ಆಯ್ಕೆಯಾಗಿದ್ದಾರೆ.
ಮೈಸೂರು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರು, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಎಸ್.ಮಹದೇವಯ್ಯ ರವರು, ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ಕುಂಬರಹಳ್ಳಿ ಸುಬ್ಬಣ್ಣ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ತಳಮಟ್ಟದಿಂದ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಮುಂಬರುವ ಜಿ.ಪಂ ಮತ್ತು ತಾ.ಪಂ ಹಾಗೂ ಗ್ರಾಮ ಪಂಚಾಯಿತಿಗಳ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ. ಪಕ್ಷವು ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ನೂತನ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿ ಸಿ.ಎಂ ಮಹದೇವಯ್ಯ ತಿಳಿಸಿದರು.

