ನಂಜನಗೂಡು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಹುಲ್ಲಹಳ್ಳಿ ಮೈಸೂರು ಮುಖ್ಯ ರಸ್ತೆಯ ರಾಂಪುರ ಗ್ರಾಮದ ತಿರುವಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಯುವಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.