ನಂಜನಗೂಡು: ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ನಂಜನಗೂಡಿನಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಹಾಡ್ಯ ರವಿ ನೇತೃತ್ವದಲ್ಲಿ ಪಟ್ಟಣದ ಚಿಂತಾಮಣಿ ಗಣಪತಿ ದೇವಸ್ಥಾನ ದಿಂದ ತಾಲ್ಲೂಕು ಕಛೇರಿ ವರೆಗೆ ಪಾದಯಾತ್ರೆ ನಡೆಸಿ, ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರಗಳನ್ನ ಕೂಗಿ ಧರಣಿ ನಡೆಸಿದರು.
ಬಳಿಕ ಸಂಘದ ರಾಜ್ಯಾಧ್ಯಕ್ಷ ಹಾಡ್ಯ ರವಿ ಮಾತನಾಡಿ, ರೈತ ಸಂಘಟನೆಗಳು ನೆಲ, ಜಲ, ಭಾಷೆ ವಿಚಾರದಲ್ಲಿ ಬೀದಿಗಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಕೆಲವು ದಿನಗಳ ಹಿಂದೆ ಚಾಮರಾಜನಗರದ ಚಾಮುಲ್ ಡೈರಿಯಲ್ಲಿ ರೈತ ಮುಖಂಡ ಹೊನ್ನೂರು ಪ್ರಕಾಶ್ ಐಸ್ ಕ್ರೀಮ್ ಘಟಕವನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದ್ದರು.
ಆದರೆ ಈ ಘೋಷಣೆ ಅಸಂವಿಧಾನ ಪದ ಬಳಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಪೊಲೀಸರು ಇವರ ವಿರುದ್ಧ ದಾಖಲು ಮಾಡಿದ್ದಾರೆ. ಈ ದೂರನ್ನ ವಾಪಸ್ ಪಡೆಯಬೇಕು ಎಂದು ಅಗ್ರಹಿಸಿದರು. ಹಾಗೂ ಇದರ ಜೊತೆಗೆ ತುಮಕೂರಿನಲ್ಲಿ ನೀರಿಗಾಗಿ ಹೋರಾಟ ಮಾಡುತ್ತಿರುವ ರೈತರ ಮೇಲೆ ಸರ್ಕಾರ ಮೊಕದ್ದಮೆ ದಾಖಲು ಮಾಡಿದ್ದು, ವಾಪಸ್ ನಿಮ್ ಪಡೆಯಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ರೈತರ ಮೇಲೆ ಹೂಡಿರುವ ಕೇಸ್ ಗಳನ್ನು ವಾಪಸ್ ಪಡೆಯದಿದ್ದಲ್ಲಿ ಸಂಘಟನೆಯಿಂದ ಬೀದಿಗಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕಸುವಿನಹಳ್ಳಿ ಮಂಜೇಶ್ ಕುಮಾರ್, ತಾಲ್ಲೂಕು ಅಧ್ಯಕ್ಷ ಅಂಬಳೆ ಮಹದೇವಸ್ವಾಮಿ, ಗೌರವಾಧ್ಯಕ್ಷ ದೇವಿರಮ್ಮನಹಳ್ಳಿ ನಂದೀಶ್, ಮುದ್ದಹಳ್ಳಿ ಚಿಕ್ಕ ಸ್ವಾಮಿ, ದೇವಿರಮ್ಮನಹಳ್ಳಿ ಕುಮಾರ್, ದೇವಿರಮ್ಮನಹಳ್ಳಿ ಹುಂಡಿ ಮಹೇಶ್, ಮಲೆಯೂರು ಹರ್ಷ, ಬನ್ನೂರು ಕೃಷ್ಣಪ್ಪ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು.

