ಮೈಸೂರು: ಬಿಜೆಪಿ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ. ಗ್ಯಾಸ್ ಸಿಲಿಂಡರ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಮೈಸೂರು ಗ್ರಾಮಾಂತರ ಯ್ಯುತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಚಂದನ್ ಗೌಡ ನೇತೃತ್ವದಲ್ಲಿ ನಗರದ ರಾಮಸ್ವಾಮಿ ವೃತ್ತದ ಬಳಿ ಖಾಲಿ ಸಿಲಿಂಡರ್ ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯಲ್ಲಿ ಹಲವು ಯ್ಯೂತ್ ಕಾಂಗ್ರೆಸ್ ನ ಕಾರ್ಯಕರ್ತರು ಭಾಗಿಯಾಗಿದ್ದರು.