ಮೈಸೂರು: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ಜಿಲ್ಲಾ ಯ್ಯೂತ್ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಖಾಲಿ ಸಿಲಿಂಡರ್ ಪ್ರದರ್ಶಿಸಿ, ಸೌದೆ ಒಲೆ ಇಟ್ಟು ಪ್ರತಿಭಟನೆ ಮಾಡಿದರು. ಜನ ಸಾಮಾನ್ಯರ ರಕ್ತ ಹೀರುತ್ತಿರುವ ಕೇಂದ್ರ ಸರ್ಕಾರ ಎಂದು ಅಣಕಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ಯ್ಯೂತ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಹಲವಾರು ಯ್ಯೂತ್ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

