ಮೈಸೂರು: ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ದಲಿತ ಸಂಘರ್ಷ ಸಮಿತಿ ಸಂಯೋಜಕ ಬೆಂಬಲ ವ್ಯಕ್ತಪಡಿಸಿದೆ.

ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ನೇತೃತ್ವದ ತಂಡ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ ಅವರು, ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ವಿದ್ಯಾರ್ಥಿಗಳ ಶಿಷ್ಯವೇತನವನ್ನು ನೀಡದೆ ದಲಿತ ವಿರೋಧಿ ಧೋರಣೆಯನ್ನು ಮಾಡುತ್ತಿರುವ ಕುಲ ಸಚಿವರನ್ನು ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.

ಈ ಕೂಡಲೇ ರಾಜ್ಯ ಸರ್ಕಾರ ಕುಲ ಸಚಿವರನ್ನು ಅಮಾನತು ಮಾಡಿ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಮಂಜೂರು ಮಾಡುವಂತೆ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳಾದ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿ ವೇತನ ನೀಡುವಂತೆ ಸೂಚಿಸಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿ ಯಾವುದೇ ಹೋರಾಟವನ್ನು ಹಮ್ಮಿಕೊಂಡರೆ ವಿದ್ಯಾರ್ಥಿಗಳ ಹೋರಾಟಕ್ಕೆ ದಲಿತ ಸಂಘರ್ಷ ಸಮಿತಿ ಸಂಯೋಜಕ ಶಾಖೆ ನಿಮ್ಮ ಜೊತೆ ಇರುತ್ತದೆ ಎಂದು ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ, ಜಿಲ್ಲಾ ಸಂಘಟನಾ ಸಂಯೋಜಕ ಗೋವಿಂದ ಹುನ್ನಗಳಿ, ಜಿಲ್ಲಾ ಖಜಾಂಚಿ ದೇವರಾಜು, ತಾಲ್ಲೂಕು ಸಂಯೋಜಕರಾದ ಪುಟ್ಟಸ್ವಾಮಿ, ಚಿಕ್ಕಣ್ಣ, ಕುಮಾರ, ಮಾಧವ, ರಾಜಶೇಖರ್, ಜೈ ಕುಮಾರ್, ಹನುಮಯ್ಯ, ಸ್ವಾಮಿ, ರಾಜಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.