ಮೈಸೂರು: ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವುದು ಕಂಡುಬಂದಿದೆ. ಇದೀಗ ಡೆಂಗ್ಯೂ ಮಹಾಮಾರಿಗೆ ಮೈಸೂರಿನಲ್ಲಿ ಎರಡನೇ ಬಲಿಯಾಗಿರುವ ಘಟನೆ ನಡೆದಿದೆ.

ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಸಿಬ್ಬಂದಿ ಲಲಿತ ಎಂಬುವವರು ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟಿದ್ದರು. ಡೆಂಗ್ಯೂ ರೋಗದ ಪ್ರಮುಖ ಲಕ್ಷಣಗಳು ಜ್ವರ, ತಲೆನೋವು, ಮೈ ಕೈ ನೋವು, ಕೀಲುನೋವು, ಹೊಟ್ಟೆನೋವು, ವಾಕರಿಕೆ, ವಾಂತಿ, ಭೇದಿ ಕಾಣಿಸಿಕೊಳ್ಳುತ್ತದೆ.