ನಂಜನಗೂಡು: ದೀಪಾವಳಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.
ಶ್ರೀ ಪಾರ್ವತಿ ಸಮೇತ ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿವಿಧ ಆಭರಣಗಳಿಂದ ಅಲಂಕಾರ ಮಾಡಿ, ಪುಷ್ಪ ಅಲಂಕಾರ ಮಾಡಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ನಂತರ ದೇವಾಲಯದ ಆವರಣದ ಸುತ್ತಲು ಬೆಳ್ಳಿ ಪಲ್ಲಕ್ಕಿಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಮಾಡಲಾಯಿತು.
ಗೋಮಾತೆಗೆ ಬೆಲ್ಲ, ಅಕ್ಕಿ, ವಸ್ತ್ರವನ್ನು ನೀಡಿ ಗೋಪೂಜೆ ಮಾಡಲಾಯಿತು. ಶ್ರೀ ನಂಜುಂಡೇಶ್ವರ ಸ್ವಾಮಿಯ ದರ್ಶನಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನವನ್ನು ಪಡೆದುಕೊಂಡರು.

