ನಂಜನಗೂಡು: ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡುತ್ತಿದ್ದ ಚಾಲಕನ ವರ್ತನೆಯನ್ನು ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಚಾಲಕನ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ನಂಜನಗೂಡಿನಿಂದ ಎಲಚಗೆರೆ, ಕೂಗಲೂರು, ಸಿದ್ದಯ್ಯನಹುಂಡಿ ಹಾಗೂ ಕಸುವಿನಹಳ್ಳಿ ಮಾರ್ಗವಾಗಿ ಸಂಚರಿಸುವ ಬಸ್ ಚಾಲಕ ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಪ್ರಯಾಣಿಕನಿಗೆ ಉಡಾಫೆಯಾಗಿ ಉತ್ತರಿಸಿದ ಚಾಲಕ, ‘ರೆಕಾರ್ಡ್ ಮಾಡಿಕೋ, ಯಾರಿಗೆ ಹೇಳುತ್ತೀಯೋ ಹೇಳಿಕೊ’ ಎಂಬ ರೀತಿಯಲ್ಲಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಸುಮಾರು 50 ಪ್ರಯಾಣಿಕರ ಜೀವದ ಸುರಕ್ಷತೆಯನ್ನು ಲೆಕ್ಕಿಸದೆ ಚಾಲಕ ಬೇಜವಾಬ್ದಾರಿಯಿಂದ ವರ್ತಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಘಟನೆ ಕುರಿತು ಪರಿಶೀಲಿಸಿ, ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

