ಮೈಸೂರು: ನಗರ ಮತ್ತು ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು. ಬೇಡ ಬ್ರೋ Say No to Drugs ಶೀರ್ಷಿಕೆ ಅಡಿಯಲ್ಲಿ ಮಾದಕ ವಸ್ತುಗಳಿಂದಾಗುವ ಅಪಾಯದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.
ನಗರದ ಸೆಂಟ್ ಫಿಲೋಮಿನ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿಸಿಪಿ ಹರ್ಷಾ ಪ್ರಿಯಂವದಾ,ಕೆ. ಎಸ್. ಸುಂದರ್ ರಾಜ್ ಸೇರಿ ಹಲವರು ಭಾಗಿಯಾಗಿದ್ದರು.

