ನಂಜನಗೂಡು: ತಾಲ್ಲೂಕಿನ ಹೆಡಿಯಾಲ ಸಮೀಪದ ಈರೇಗೌಡನಹುಂಡಿ ಗ್ರಾಮದಲ್ಲಿ ಬಿರುಗಾಳಿಯ ರಭಸಕ್ಕೆ ತೆಂಗಿನ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಎರಡು ವಿದ್ಯುತ್ ಕಂಬಗಳು ದರೆಗರುಳಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ತೆಂಗಿನ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ, ಎರಡು ವಿದ್ಯುತ್ ಕಂಬಗಳು ನೆಲಕಚ್ಚಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಗ್ರಾಮೀಣ ಪ್ರದೇಶದಲ್ಲಿ ಅಳವಡಿಸಿರುವ ವಿದ್ಯುತ್ ಕಂಬಗಳು ಕಳಪೆಯಿಂದ ಕೂಡಿದ್ದು, ಮಳೆ ಮತ್ತು ಬಿರುಗಾಳಿಗೆ ಕಂಬಗಳು ವಾಲಾಡುತ್ತಿವೆ. ಆದ್ದರಿಂದ ಚೆಸ್ಕಾಂ ಅಧಿಕಾರಿಗಳು ಕಳಪೆ ಇರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

