ನಂಜನಗೂಡು: ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಜಗಿದು ಹಸುವಿನ ಬಾಯಿ ಛಿದ್ರವಾದ ದಾರುಣ ಘಟನೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತಿದ್ದಾಗ ಈ ಘಟನೆ ನಡೆದಿದೆ.
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರ ಹಸು ಇದಾಗಿದ್ದು, ಅದರ ಮೂಕ ರೋದನೆ ಮನಕಲಕುವಂತಿತ್ತು. ಗ್ರಾಮದ ವಾಟರ್ ಟ್ಯಾಂಕ್ ನ ಬಳಿ ಬಳಿ ಜಾನುವಾರುಗಳು ಮೇವು ಮೇಯಲು ತೆರಳುತ್ತಿದ್ದ ವೇಳೆ ಕಾಡುಹಂದಿ ಬೇಟೆಗೆ ಅಡಗಿಸಿಟ್ಟಿದ್ದ ಸಿಡಿಮದ್ದು ಜಗಿದು ಸ್ಫೋಟಗೊಂಡಿದೆ.
ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದೆ ಎಂದು ರೈತ ನೋವು ತೋಡಿಕೊಂಡಿದ್ದಾನೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಡು ಹಂದಿಗಳ ಬೇಟೆಗೆ ಸಿಡಿಮದ್ದು ಇಟ್ಟು ಜಾನುವಾರುಗಳ ಸಾವಿಗೆ ಕಾರಣರಾಗಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾನೂನಿನಡಿ ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಯನ್ನು ಕೈಗೊಂಡಿದ್ದಾರೆ.

