ಮೈಸೂರು : ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಮಕ್ಕಳ ಜೊತೆ ತಾಯಿ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಹೇಮಲತಾ (38) ವರ್ಷ, ಮಕ್ಕಳಾದ ಅನು (15) ವರ್ಷ ಚೇತನ್ (13) ವರ್ಷ ನೇಣಿಗೆ ಶರಣಾಗಿದ್ದಾರೆ. ತಂಬಾಕು ಬ್ಯಾರನ್ ಮನೆಯ ಪೋಲ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಮಹದೇವ ಎಂಬುವರ ಪತ್ನಿ, ಮಕ್ಕಳು. ತಾಯಿ ಹೇಮಲತಾ ಮೊದಲು ಮಕ್ಕಳಿಗೆ ನೇಣು ಹಾಕಿ ನಂತರ ತಾವು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿದ್ದಾರೆ.

