ನಂಜನಗೂಡು: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಹನುಮನಪುರ ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮನೆಯಾಗಿದ್ದು, ಎರಡು ಮೂರು ದಿನಗಳಿಂದ ನಿರಂತರವಾಗಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ಕುಟುಂಬಸ್ಥರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ .
ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ದವಸಧಾನ್ಯಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿದ್ದು ನಷ್ಟ ಅನುಭವಿಸುವಂತಾಗಿದೆ. ಈ ಕೂಡಲೇ ಸರ್ಕಾರ ಮನೆ ಪರಿಹಾರ ನೀಡಬೇಕು ಎಂದು ಸಿದ್ದರಾಜು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಎಂ.ಪಿ ರಾಜಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆ ಕುಸಿದು ಬಿದ್ದಿರುವ ಬಗ್ಗೆ ವರದಿಯನ್ನು ತಯಾರಿಸಿ ತಹಶೀಲ್ದಾರ್ ರವರಿಗೆ ಕಳುಹಿಸಲಾಗುವುದು. ನಂತರ ಸರ್ಕಾರದಿಂದ ಅವರಿಗೆ ಸೂಕ್ತ ಪರಿಹಾರವನ್ನು ನೀಡಲಾಗುತ್ತದೆ ಎಂದು ಗ್ರಾಮ ಲೆಕ್ಕಾಧಿಕಾರಿ ಎಂ.ಪಿ ರಾಜಮಣಿ ಭರವಸೆ ನೀಡಿದರು.

