ಮೈಸೂರು : ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ.
ಮಂಡ್ಯ ಜಿಲ್ಲೆಯ ಡಿಕೆಶಿ ಅಭಿಮಾನಿಗಳಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರಾದ ರಾಜು, ವೇಣು ಹಾಗೂ ನಂಜುಂಡಸ್ವಾಮಿ ನೇತೃತ್ವದಲ್ಲಿ ಪೂಜೆ ಮಾಡಲಾಯಿತು.
ಡಿಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಬೇಡಿಕೊಂಡು ಅಭಿಮಾನಿಗಳು ಹೀಡುಗಾಯಿ ಹೊಡೆದರು. ಡಿಕೆಶಿ ಅಭಿಮಾನಿಗಳಿಂದ ಸಾವಿರ ತೆಂಗಿನಕಾಯಿ ಹೊಡೆದು ದೇವರಲ್ಲಿ ಬೇಡಿಕೊಂಡರು. ಡಿಕೆಶಿ ಪರ ಅಭಿಮಾನಿಗಳು, ಕಾರ್ಯಕರ್ತರು ಘೋಷಣೆ ಕೂಗಿದರು.

