ಮೈಸೂರು : ಹುಲಿ ದಾಳಿಗೆ ರೈತ ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಕುಟುಂಬಕ್ಕೆ  ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಮೈಸೂರು ಜಿಲ್ಲೆ ಸರಗೂರು ತಾಲೂಕು ಬಡಗಲಪುರದಲ್ಲಿ ದಾಳಿ ನಡೆದಿತ್ತು. ದಾಳಿಯಿಂದ ರೈತ ಮಹದೇವೇಗೌಡ 45 ಗಂಭೀರ ಗಾಯಗೊಂಡಿದ್ದರು.

ಮುಖದ ಬಲ ಭಾಗ, ಕಣ್ಣುಗಳು ಸಂಪೂರ್ಣ ಕಿತ್ತು ಬಂದಿತ್ತು. ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ರೈತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪೂರ್ಣ ಗುಣಮುಖ ಆಗುವ ವರೆಗೂ ಸರ್ಕಾರವೇ ಚಿಕಿತ್ಸೆ ಕೊಡಿಸುವುದಾಗಿ ಸಿಎಂ ಭರವಸೆ ನೀಡಿದರು.