ನಂಜನಗೂಡು: ನಾಲ್ಕು ದಿನಗಳ ಹಿಂದೆ ನಂಜನಗೂಡು ತಾಲೂಕಿನ ದೇವರಾಯಶೆಟ್ಟಿಪುರ (ಹಂಚಿಪುರ) ಗ್ರಾಮದಲ್ಲಿ ರೈತ ಶಿವಕುಮಾರ್ ಅವರ ಜೀವ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ರೈತರು ಹಾಗೂ ಗ್ರಾಮಸ್ಥರ ಜೀವ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ ನೀಡಿದ್ದಾರೆ.

