ನಂಜನಗೂಡು: ಕೃಷಿ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿಯ ಮುಂಭಾಗದಲ್ಲಿ ರೈತ ಸಂಘದ ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು .ರಾಜ್ಯ ಸರ್ಕಾರದ ವಿರುದ್ಧ ಅಧಿಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ಏಳು ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಟ್ರಾನ್ಸ್ ಪಾರ್ಮಾರ್ ಗಳು ಸುಟ್ಟರೆ ನಿಗದಿತ ಅವಧಿಯ ಒಳಗೆ ದುರಸ್ತಿ ಪಡಿಸಬೇಕು. ರೈತರ ಪಂಪ್ ಸೆಟ್ ಗಳಿಗೆ ನೀಡಿರುವ ವಿದ್ಯುತ್ ನನ್ನು ಅಕ್ರಮ ಅಕ್ರಮಗೊಳಿಸಬೇಕು. ಜೊತ ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಿ ಪ್ರಾಣ ಹಾನಿಯಾಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿ ಚೆಸ್ಕಾಂ ಎಇಇ ದೇವರಾಜಯ್ಯ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಚಿಕ್ಕಕವಲಂದೆ ಪ್ರತಾಪ್, ಹುಣಸನಾಳು ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.