ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಖಂಡಿಸಿ ಮೈಸೂರಿನಲ್ಲಿ ರೈತರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರೈತ ಸಂಘದಿಂದ ಮೈಸೂರಿನ ಕಾಡಾ ಕಚೇರಿ ಬಳಿ ಪ್ರತಿಭಟನೆ ನಡೆದಿದೆ.ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯುವ ಯತ್ನಕ್ಕೆ ಮುಂದಾಗಿದ್ದಾರೆ.ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಕೂಗಿ ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನಮ್ಮ ಕೆರೆಕಟ್ಟೆಗಳು ಜಾನುವಾರುಗಳಿಗೆ ನೀರಿಲ್ಲ.ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿದೆ.ನಮಗೆ ನೀರಿಲ್ಲದ ಸಮಯದಲ್ಲಿ ಅವರಿಗೆ ನೀರು ಬಿಡೋದು ಅನ್ಯಾಯ.ಸರ್ವ ಪಕ್ಷಗಳ ಸಭೆಯ ನಿರ್ಣಯದಂತೆ ನೀರು ಬಿಡಬಾರದು ಎಂದು ಆಗ್ರಹಿಸಿದರು.
ನಾಳಿನ ಬಂದ್ ಗೆ ನಮ್ಮ ಬೆಂಬಲವಿದೆ. ನೀರಿಗಾಗಿ ಬಂದ್ ಮಾಡಬೇಕಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕಿದೆ ಎಂದು ರೈತರು ನಿರ್ಧರಿಸಿದ್ದಾರೆ.

