ನಂಜನಗೂಡು: ಶಾಸಕರು ಮತ್ತು ರೈತರ ಮುಖಮುಖಿ ಕಾರ್ಯಕ್ರಮಕ್ಕೆ ರೈತ ಸಂಘ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಸ್ವಕ್ಷೇತ್ರದ ನಂಜನಗೂಡಿನ ತಾಂಡವಪುರ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ. ಜ. 23ಕ್ಕೆ ರೈತರು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಯಲಿದೆ.
ವಿನೂತನ ಕಾರ್ಯಕ್ರಮಕ್ಕೆ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಮುಂದಾಗಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪೂರ್ವಭಾವಿ ಸಭೆ ನಡೆಯುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಏಕೀಕರಣ ಸಮಿತಿಯ ರಾಜ್ಯ ಮುಖಂಡ ಪಚ್ಚೆ ನಂಜುಂಡಸ್ವಾಮಿ ಮತ್ತು ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.
ನಂಜನಗೂಡು ನಗರದ ಎಪಿಎಂಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ವಿನೂತನ ಕಾರ್ಯಕ್ರಮಕ್ಕೆ ರೈತ ಸಂಘ ಮುಂದಾಗಿದೆ. ಸುಮಾರು 5 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್, ಹಾಗೂ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ವರುಣ ಕ್ಷೇತ್ರದ ಡಾ.ಯತೀಂದ್ರ ಸಿದ್ದರಾಮಯ್ಯ, ಹೆಡ್.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಸುತ್ತಮುತ್ತಲಿನ ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳೊಂದಿಗೆ ರೈತರ ಸಭೆ ಆಯೋಜಿಸಿದ್ದು,
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಹಕ್ಕೋತ್ತಾಯ ಮಂಡನೆ. ಕಬ್ಬಿಗೆ ಬೆಂಬಲ ಬೆಲೆ ನಿಗದಿ ಪಡಿಸಬೇಕು, ಬಗರ್ ಹುಕುಂ ಸಾಗುವಳಿ, ದುರಸ್ತಿ ಕಾರ್ಯ, ರೈತರ ಸಾಲ, ವಕ್ ಬೋರ್ಡ್ ವಿಚಾರ ಸೇರಿದಂತೆ ರೈತರ ಸಮಸ್ಯೆಗಳನ್ನು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಮುಖಮುಖಿಯಾಗಿ ಚರ್ಚಿಸುವ ಸಲುವಾಗಿ ನಡೆಯುತ್ತಿರುವ ವಿನೂತನ ಕಾರ್ಯಕ್ರಮವಾಗಿದೆ. ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಶೈಲಜಾ, ಶಂಕರನಾಯಕ, ಮೋಹನ್, ಉಪ್ಪನಹಳ್ಳಿ ದೇವರಾಜ್, ಹಂಬಳೆ ರವಿ ಸೇರಿದಂತೆ ಹಲವು ರೈತರು ಭಾಗಿ.

