ಮೈಸೂರು : ಗ್ರಾಮ ಪಂಚಾಯತಿ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ವರುಣ ಗ್ರಾಮಪಂಚಾಯಿತಿ ಕಾರ್ಯದರ್ಶಿ-1 ದಿವ್ಯಾ  ಆತ್ಮಹತ್ಯೆ ಯತ್ನಿಸಿದ್ದಾರೆ. ಮೈಸೂರಿನ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಂಚಾಯ್ತಿಯಲ್ಲೆ 13 ಕ್ಕೂ ಹೆಚ್ಚು ಮಾತ್ರೆ ಸೇವನೆ ಮಾಡಿದ್ದಾರೆ.

ಜ್ಞಾನ ತಪ್ಪಿ ಬಿದ್ದಿದ್ದ ದಿವ್ಯಾಳನ್ನ PDO ಆಸ್ಪತ್ರೆಗೆ ದಾಖಲಿಸಿದ್ದಾರೆ. CEO, EO ಅಧಿಕಾರಿಗಳು ವಿನಾಕಾರಣ ತನಿಖೆ ಹೆಸರಲ್ಲಿ ಮಾನಸಿಕ ಕಿರುಕುಳ ಕೊಟ್ಟಿದ್ದಾರೆಂದು ಆರೋಪಿಸಲಾಗಿದೆ. ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದೆ.

ಸದ್ಯ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಿಂದ ಮನನೊಂದು ಕಛೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತುಂಬಲಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿರುವ ಪ್ರವೀಣ್ , ವರುಣ ಪಂಚಾಯತಿಗೆ ಬರಲು ಕುತಂತ್ರ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಮಾನಸಿಕ ಕಿರುಕುಳ ತಾಳಲಾರದೆ ಆತ್ಮಹತ್ಯೆ ಯತ್ನ ಆರೋಪ ಕೇಳಿಬಂದಿದ್ದು, ವರುಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.