ಮೈಸೂರು : ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮೈಸೂರು ತಾಲ್ಲೂಕು ಬೋರೆ ಆನಂದೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಶನಿವಾರೇಗೌಡ, ಶ್ರೀನಿವಾಸೇ ಗೌಡ, ವೆಂಕಟೇಶೇ ಗೌಡ ಎಂಬುವವರಿಗೆ ಸೇರಿದ ಮನೆಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

