ಮೈಸೂರು: ಮೈಸೂರಿನ ಗೋಕುಲಂ ಏರಿಯಾದ ಅಪಾರ್ಟ್ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಅಪಾರ್ಟ್ಮೆಂಟ್ ನಿವಾಸಿಗಳು ಕಟ್ಟಡ ಟೆರೇಸ್ ತೆರಳಿದರು. ಬಕೆಟ್ ನಲ್ಲಿ ನೀರು ಸುರಿದು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು.
ಅಪಾರ್ಟ್ ಮೆಂಟ್ ನಲ್ಲಿದ್ದ ಜನರನ್ನು ಸುರಕ್ಷಿತ ಜಾಗಕ್ಕೆ ಸಿಬ್ಬಂದಿಗಳು ಕಳುಹಿಸಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿಗಳ ಕಾರ್ಯಾಚರಣೆಯಿಂದ ಅನಾಹುತ ತಪ್ಪಿದೆ.

