ಮೈಸೂರು: ಯುವಕರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಮೈಸೂರಿನ ಮಾನಸ ಗಂಗೋತ್ರಿ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಹಲ್ಲೆ ನಡೆಸಿದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಯುವತಿ ವಿಚಾರಕ್ಕೆ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಯುವತಿ ವಿಚಾರವಾಗಿ ಕಾಲೇಜಿಗೆ ಯುವಕರನ್ನು ಕರೆಸಿ ಹಲ್ಲೆ ಮಾಡಿದ್ದಾರೆ. ಈ ವೇಳೆ ಘಟನೆಗೆ ಸಂಬಂಧವೇ ಇಲ್ಲದ ಯುವಕನ ಮೇಲೂ ಹಲ್ಲೆ ನಡೆದಿದೆ.

ಹಲ್ಲೆ ನಡೆಸುವಾಗ ಯುವಕನ ಬೈಕ್ ಬೀಳಿಸಿದೆ. ಈ ಬಗ್ಗೆ ಪ್ರಶ್ನೆ ಮಾಡಿದ ಯುವಕನಿಗೂ ಗುಂಪು ಥಳಿಸಿದೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.