ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ವತಿಯಿಂದ ತಿ.ನರಸೀಪುರದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಸಂಘದ ತಾಲೂಕು ಅಧ್ಯಕ್ಷೆ ಆರ್ ಶಿಲ್ಪ ಅವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಸುದ್ದಿಗೋಷ್ಠಿ ಕುರಿತು ಪ್ರದೀಪ್ ಮತ್ತು ಶಿಲ್ಪ ಮಾತನಾಡಿ, ಅತಿಥಿ ಶಿಕ್ಷಕರ ಕಾಯಂಮಾತಿಗೆ ಶೀಘ್ರವೇ ಕ್ರಮ ಕೈಗೊಳ್ಳಬೇಕು, 12,000 ಗೌರವವನ್ನು ನೀಡುತ್ತಿರುವ ಸರ್ಕಾರ ಮತ್ತೊಮ್ಮೆ ಪರಿಸ್ಕರಿಸಿ 25000 ವೇತನ ನೀಡಬೇಕು ಸೇರಿದಂತೆ ವಿವಿಧ 10 ಬೇಡಿಕೆಗೆ ಆಗ್ರಹಿಸಿದರು.
ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ ಸ್ಪಂದನೆ ನೀಡಬೇಕು ಇಲ್ಲವಾದಲ್ಲಿ ಜೂನ್ 13 ನೇ ತಾರೀಖಿನಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕಾರ್ತಿಕ್, ಪ್ರದೀಪ್, ರಘು, ದೀಪು ಹಾಜರಿದ್ದರು.

