ತಿ. ನರಸೀಪುರ: ಮೈಸೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಕೆಎಂಎಫ್ ನಿರ್ದೇಶಕ ಕೆ ಸಿ ಬಲರಾಮ್ ರವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಕುಪ್ಯಾ ಗ್ರಾಮದ ಡೈರಿ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ದಿವಂಗತ ಕೆ ಸಿ ಬಲರಾಮ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖಂಡರುಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆ.ಸಿ.ಬಲರಾಮ್ ರವರ ಪುಣ್ಯಸ್ಮರಣೆ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು.

ಡೈರಿ ಅಧ್ಯಕ್ಷ ಕೆ.ಬಿ ಪ್ರಭಾಕರ್ ಮಾತನಾಡಿ ಗ್ರಾಮಕ್ಕೆ ಅವರ ಅಪಾರ ಕೊಡುಗೆ ನೀಡಿದ್ದಾರೆ. ಅಧಿಕಾರದ ಅವಧಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ಆಸ್ಪತ್ರೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ ಕೆ ಸಿ ಬಲರಾಮ್ ಕುಪ್ಯಾ ಗ್ರಾಮದ ಮೇಲೆ ಬಹಳ ಪ್ರೀತಿ ಹೊಂದಿದ್ದರು.

ಗ್ರಾಮೀಣ ಭಾಗದ ಜನತೆಗೆ ಅನುಕೂಲವಾಗಲಿ ಎಂದು ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿದ್ದೇವೆ ಎಂದರು. ಈ ಸಂದರ್ಭ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಪುಟ್ಟಸ್ವಾಮಿ, ಕುರುಬರ ಸಂಘದ ತಾಲೂಕು ಉಪಾಧ್ಯಕ್ಷೆ ಕುಪ್ಯಾ ಭಾಗ್ಯಮ್ಮ, ಗ್ರಾಪಂ ಅಧ್ಯಕ್ಷ ಗವಿ ಸಿದ್ದಯ್ಯ, ಎಸ್.ಎಸ್.ಕೆ.ನವೀನ್, ಜಯರಾಮ್ ಇದ್ದರು.