ನಂಜನಗೂಡು: ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಮಹದೇವನಗರ ಗ್ರಾಮದಲ್ಲಿ ಕುರಿ ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಭಾರಿ ಗಾತ್ರದ ಹೆಬ್ಬಾವು ಸೆರೆಯಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಉರಗಪ್ರೇಮಿ ಸಂಜಯ್ ಪಾಟೀಲ್ ಭಾಗಿಯಾಗಿದ್ದರು.