ಮೈಸೂರು : ನಾನು ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ. ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತದೆ. ನಮ್ಮಿಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರು ಅದು ಆಗುವುದಿಲ್ಲ. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ಡಿ.ಕೆ‌ಶಿವಕುಮಾರ್ ಕೈ ಹಿಡಿದು ಎತ್ತಿ ನಾವು ಚೆನ್ನಾಗಿದ್ದೇವೆ ಎಂದು ಸಿಎಂ ಮಾಧ್ಯಮಕ್ಕೆ ತೋರಿಸಿದರು.

ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮ್ಮರು. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ. ಸುರ್ಜೇವಾಲಾ ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಸಲಹೆ ಕೊಡುತ್ತಾರೆ‌. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ.

ಹಾಸನದ ಹೃದಾಯಘಾತ ಹೆಚ್ಚಾದ ವಿಚಾರ. ಅದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ಅದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಖುತ್ತೇನೆ ಎಂದರು.

ಮಹಾರಾಷ್ಟ್ರದಲ್ಲಿ ದ್ವಿಭಾಷಾ ಶಿಕ್ಷಣಕ್ಕೆ ಅಸ್ತು ವಿಚಾರ‌ವಾಗಿ, ನಾವು ದ್ವಿಭಾಷಾ ಶಿಕ್ಷಣದ ಪರ ಇದ್ದೇವೆ. ಮೊದಲಿನಿಂದಲೂ ನಮ್ಮದು ದ್ವಿಭಾಷಾ ಶಿಕ್ಷಣದ ವಾದಾ ಇದೆ. ಈಗಲೂ ದ್ವಿಭಾಷಾ ಪ್ರದೇಶಗಳಲ್ಲಿ ಶಿಕ್ಷಣಕ್ಕೆ ನಾವು ಬದ್ಧ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.