ಮೈಸೂರು: ಸಿಎಂ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿರುವುದನ್ನ ಮುಡಾ ವಲಯ ಅಧಿಕಾರಿಗಳು ಪತ್ತೆ ಹಚ್ಚಿದ್ದು ತುರ್ತಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆದಿದ್ದಾರೆ.

ಮೈಸೂರು ನಗರ ಕಾಳಿದಾಸ ರಸ್ತೆ ಪಂಚವಟಿ ಸರ್ಕಲ್ ಬಳಿ ಇರುವ ಸಿಎ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಾದ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವುದಾಗಿ ಮುಡಾ ವಲಯ 4 ರ ಅಧಿಕಾರಿಗಳು ಪತ್ತೆ ಹಚ್ಚಿದ್ದು.ಈ ಬಗ್ಗೆ ನಿಯಮಾನುಸಾರ ಪರಿಶೀಲನೆ ನಡೆಸಿ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಆಯುಕ್ತರಿಗೆ ಪತ್ರ ಬರೆದಿದ್ದಾರೆ.