ಮೈಸೂರು: ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನ ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.

10-12 ಮಂದಿ ಯುವಕರು ಗುಂಪು ಕಟ್ಟಿಕೊಂಡು ಏಕಾ ಏಕಿ ಮನೆಗೆ ನುಗ್ಗಿ ಥಳಿಸಿದ್ದಾರೆ. ಮುಸ್ಲಿಂ ಸಮುದಾಯದ ಯುವಕರ ಗುಂಪು ದಲಿತ ಜನಾಂಗದ ಕುಟುಂಬವಿದ್ದ ಮನೆಗೆ ನುಗ್ಗಿ ಕೃತ್ಯವೆಸಗಿದ್ದಾರೆ.

ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮರಾ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ. ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.