ಮೈಸೂರು: ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್ ರವರನ್ನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತದಾರರನೊಂದಣಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ.
ಈ ಹಿಂದೆ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರವರು ನಗರಾಭಿವೃದ್ದಿ ಸಚಿವರಿಗೆ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿತ್ತು.
ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಟಿ.ನರಸೀಪುರ ಕ್ಷೇತ್ರ ಮತದಾರರನೊಂದಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ಜವಾಬ್ದಾರಿ ಹಿನ್ನಲೆ ರಕ್ಷಿತ್ ರವರ ಸ್ಥಳಕ್ಕೆ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಪ್ರಭಾರ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕೆ.ಜಾನ್ಸನ್ ರವರನ್ನ ನೇಮಕ ಮಾಡಲಾಗಿದೆ.
ಇದೀಗ ಕೆ.ಜಾನ್ಸನ್ ರವರ ಹೆಗಲ ಮೇಲೆ ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ,ಕಾರ್ಯದರ್ಶಿಯಾಗಿ ಹಾಗೂ ಟಿ.ನರಸೀಪುರ ಕ್ಷೇತ್ರ ಮತದಾರರನೊಂದಣಾಧಿಕಾರಿ ಹುದ್ದೆ ಒಟ್ಟು ಮೂರು ಜವಾಬ್ದಾರಿಯನ್ನ ನಿರ್ವಹಿಸುವಂತೆ ಸರ್ಕಾರ ಆದೇಶಿಸಿದೆ.

