ಮೈಸೂರು: ಕಾವೇರಿ ನೀರು ಬಿಡುಗಡೆ ಆದೇಶ ಧಿಕ್ಕರಿಸಿ ಕರೆ ನೀಡಿದ ಕರ್ನಾಟಕ ಬಂದ್ಗೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ದಿನಂತೆ ಮೈಸೂರು ಸಹಜ ಸ್ಥಿತಿಯಲ್ಲಿ ಮುಂದುವರೆದಿದೆ. ನಗರ ಬಸ್ ನಿಲ್ದಾಣದಿಂದ ಬಸ್ಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲೇ ಮುಂದುವರಿದಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಎಂದಿನಂತೆಯೇ ಕಂಡುಬಂದಿದೆ. ಅಂಗಡಿ-ಮುಂಗಟ್ಟುಗಳೂ ಬಹುತೇಕ ತೆರೆದಿವೆ ಬಂದ್ಗೆ ಕೆಲ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿವೆ. ನಗರದ ಕೆಲವೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟಾರೆ ಮೈಸೂರಿನಲ್ಲಿ ಕರ್ನಾಟಕ ಬಂದ್ ಸಾಂಕೇತಿಕ ಪ್ರತಿಭಟನೆಗೆ ಮಾತ್ರ ಸೀಮಿತವಾದಂತಾಗಿದೆ.

