ನಂಜನಗೂಡು: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯೊಂದು ಕೊನೆಗೂ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ನಂಜನಗೂಡು ತಾಲ್ಲೂಕಿನ ದಾಸನೂರು ಮತ್ತು ಹನುಮನಪುರ ಗ್ರಾಮಗಳಲ್ಲಿ ಕಳೆದ ಎರಡು ಮೂರು ತಿಂಗಳಿಂದ  ಚಿರತೆಯ ಹಾವಳಿ ಹೆಚ್ಚಾಗಿತ್ತು.

ಜಾನುವಾರುಗಳ ಮೇಲೆ ನಿರಂತರವಾಗಿ ದಾಳಿ ನಡೆಸಿ ತಿಂದು ಹಾಕಿತ್ತು. ಇದರಿಂದ ಗ್ರಾಮಸ್ಥರು ಭಯಭೀತಿಯಲ್ಲಿ ಓಡಾಡುತ್ತಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರು ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯ ಮಾಡಿದ್ದರು.

ಕೂಡಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಅಧಿಕಾರಿಗಳು ದಾಸನೂರು ಮತ್ತು ಹನುಮನಪುರ ಗ್ರಾಮಗಳ ಮದ್ಯೆ ಬೋನು ಇರಿಸಿದ್ದರು. ಕೊನೆಗೂ ಚಿರತೆ ಬೋನಿಗೆ ಬಿದ್ದಿದೆ. ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದು ಚಿರತೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.