ಮೈಸೂರು : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಮರಿ ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮಟಕೆರೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
8 ರಿಂದ 9 ತಿಂಗಳ ಗಂಡು ಚಿರತೆ ಮರಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮೃತ ಚಿರತೆ ಕಳೆಬರಹ ಸ್ಥಳಾಂತರಿಸಿದ್ದು. ಮರಣೋತ್ತರ ಪರೀಕ್ಷೆ ಬಳಿಕ ಅಗ್ನಿಸ್ಪರ್ಶ ನಡೆಯಿತು.

