ಮೈಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಮೈಸೂರು–ಹುಣಸೂರು ಹೆದ್ದಾರಿಯ ಅರಬ್ಬಿತಿಟ್ಟು ವನ್ಯಧಾಮದ ಬಳಿ ನಡೆದಿದೆ.

ಆಹಾರ ಅರಸಿ ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಅರಬ್ಬಿತಿಟ್ಟು ಸಂರಕ್ಷಿತ ಅರಣ್ಯದಿಂದ ಎದುರಿನ ಅರಣ್ಯದತ್ತ ಚಿರತೆ ತೆರಳುತ್ತಿತ್ತು. ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಳಿಕೆರೆ ಠಾಣೆ ಪೊಲೀಸರಿಂದಲೂ ಪರಿಶೀಲನೆ ನಡೆಸಲಾಯಿತು. ಅಪರಿಚಿತ ವಾಹನ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.