ನಂಜನಗೂಡು: ಏಕಾಏಕಿ ಮನೆಯೊಳಗೆ ಚಿರತೆ ನುಗ್ಗಿ ಲಾಕ್ ಆಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಯಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿರತೆಯೊಂದು ಕಾಡಿನಿಂದ ನಾಡಿಗೆ ಬಂದು ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಏಕಾಏಕಿ ನುಗ್ಗಿದೆ. ಇದನ್ನು ಕಂಡ ಗ್ರಾಮಸ್ಥರು ತಬ್ಬಿಬ್ಬಾರಾಗಿದ್ದಾರೆ.

ಪಾಳು ಬಿದ್ದ ಮನೆ ಒಳಗೆ ಸೇರಿಕೊಂಡಿದ್ದ ಚಿರತೆಯನ್ನು ಗ್ರಾಮಸ್ಥರು ಲಾಕ್ ಮಾಡಿಕೊಂಡು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕೊನೆಗೂ ಚಿರತೆಯನ್ನು ಸೆರೆಹಿಡಿದಿದ್ದಾರೆ. ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.