ನಂಜನಗೂಡು: ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ. ಹರ್ಷವರ್ಧನ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ನೋಡಿದರೆ ಸಂತೋಷ ಮತ್ತು ಸ್ಪೂರ್ತಿ ಸಿಗುತ್ತದೆ. ಕಾಂಗ್ರೆಸ್ ಪಕ್ಷ ಪ್ರಸ್ತುತ ಅಧಿಕಾರದಲ್ಲಿದೆ. ಮುಖ್ಯ ಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ.

ಸಿಎಂ ಸಿದ್ದರಾಮಯ್ಯ ರವರು ಎಷ್ಟು ದಿನ ಇರ್ತಾರೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ದಲಿತರಿಗೆ ಮುಖ್ಯ ಮಂತ್ರಿ ಸ್ಥಾನಕೊಡಲಿ. ಪಕ್ಷದಲ್ಲಿ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಾ.ಹೆಚ್ ಸಿ ಮಹದೇವಪ್ಪ ಇದ್ದಾರೆ. ಇಂತಹ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಈಗಾಗಲೇ ಜಾತಿ ಗಣತಿ ನಡೆಯುತ್ತಿರುವುದು ಸಂತೋಷದ ವಿಚಾರ. ಇದರಿಂದ ಅನ್ಯಾಯಕ್ಕೆ ಒಳಗಾಗಿರುವ ಸಮುದಾಯಗಳಿಗೆ ಸೌಲಭ್ಯಗಳು ಸಿಗುತ್ತವೆ.

ನನಗೆ ಎಡ ಬಲ ಅನ್ನೋದು ಇಲ್ಲ, ಎಲ್ಲರೂ ಒಂದೇ. ದಲಿತರಿಗೆ ಸಿಎಂ ಮಾಡುವ ಪಕ್ಷ ಎಂದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದರು ಎಂದು ಬದನವಾಳು ಗ್ರಾಮದಲ್ಲಿ ಮಾಜಿ ಶಾಸಕ ಬಿ ಹರ್ಷವರ್ಧನ್ ಹೇಳಿದರು.