ಮೈಸೂರು: ಹುಸಿಬಾಂಬ್ ಸಂದೇಶ ನೀಡಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಅಡಗಿ ಕುಳಿತು ನಿಗೂಢವಾಗಿ ಬಾಂಬ್ ಸ್ಪೋಟಿಸುವ ಬಗ್ಗೆ ಬೆದರಿಕೆ ಸಂದೇಶವನ್ನು ವ್ಯಕ್ತಿ ಹಾಕುತ್ತಿದ್ದರು. ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತ 6 ನೇ ಕ್ರಾಸ್ ನ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಶ್ರೀನಿವಾಸ್ ಬಂಧನವಾಗಿದೆ.
ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಪೋಟವಾಗುವ ಬೆದರಿಕೆ ಸಂದೇಶ ರವಾನೆ ಮಾಡಿದ್ದಾರೆ. ಈ ಮೂಲಕ ವ್ಯಕ್ತಿ ಆತಂಕ ಸೃಷ್ಟಿ ಮಾಡಿದ್ದರು.
ಒಂದೇ ತಿಂಗಳಿನಲ್ಲಿ ಹಲವು ಬಾರಿ ಮೇಲ್ ಮೂಲಕ ಸಂದೇಶ ರವಾನೆ ಮಾಡಲಾಗಿದೆ.
ಈ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಮೈಸೂರಿನಿಂದ ಕಾರ್ಯಾಚರಣೆ ಮಾಡಿರುವ ಬಗ್ಗೆ ಮಾಹಿತಿ ನೀಡಲಾಯಿತು. ದೆಹಲಿ ಪೊಲೀಸರ ತಂಡ ದಿಢೀರ್ ದಾಳಿ ಮಾಡಿ ಆರೋಪಿ ಶ್ರೀನಿವಾಸ್ ಬಂಧನ ಮಾಡಲಾಗಿದೆ. ದೆಹಲಿ ಪೊಲೀಸರಿಗೆ ಮೈಸೂರಿನ ವಿವಿ ಪುರಂ ಠಾಣೆ ಪೊಲೀಸರು ಸಾಥ್ ನೀಡಿದ್ದಾರೆ.
ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಪೊಲೀಸರು ದೆಹಲಿಗೆ ಕರೆದೊಯ್ಯಲಿದ್ದಾರೆ. ಆರೋಪಿಯ ಮನೆಯಲ್ಲಿ ಹಲವು ಸಿಮ್ ಗಳು ಹಾಗೂ ಲ್ಯಾಪ್ ಟ್ಯಾಪ್ ಗಳನ್ನು ಸೀಜ್ ಮಾಡಲಾಗಿದೆ.

