ಗುಂಡ್ಲುಪೇಟೆ : ಬೈಕ್ ನಲ್ಲಿ ಅಕ್ರಮವಾಗಿ ಒಣಗಾಂಜಾ ಸಾಗಾಟ ಮಾಡುತ್ತಿದ್ದವನನ್ನ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಪಟ್ಟಣದ ಟೀಚರ್ಸ್ ಲೇಔಟ್ ಬಳಿ ತಡರಾತ್ರಿ ನಡೆದಿದೆ.
ಪಟ್ಟಣದ ಮಹಾದೇವಪ್ರಸಾದ್ ನಗರದ ನಿವಾಸಿ ಅಬ್ದುಲ್ ರಜಾಕ್ ಬಂಧಿತ ಆರೋಪಿ. ಬೈಕ್ ನಲ್ಲಿ ಗಾಂಜಾ ಸಾಗಾಟದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿ 900 ಗ್ರಾಂ ಒಣಗಾಂಜಾ, ಬೈಕ್ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

